ಬದುಕಿಗಾರ್ ನಾಯಕರು, ಏಕನೊ ಅನೇಕರೋ? ।
ವಿಧಿಯೊ ಪೌರುಷವೊ ಧರುಮವೊ ಅಂಧಬಲವೋ? ॥
ಕುದುರುವುದೆಂತು ಈಯವ್ಯವಸ್ಥ್ರೆಯ ಪಾಡು? ।
ಅದಿಗುದಿಯೆ ಗತಿಯೇನೋ? - ಮಂಕುತಿಮ್ಮ ॥ ೭ ॥
ಇಂಥಹ ಪ್ರಶ್ನೆಗಳು ಇತಿಹಾಸದಲ್ಲಿ ಧರ್ಮರಾಯನಿಗೂ ಬಂದಿತ್ತಂತೆ...
ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ ಬದುಕಿಗೆ ನಾಯಕ, ವಿಧಿಯೋ,ಧರ್ಮವೋ,ಅಥವಾ ಅಂಧ ಶ್ರದ್ಧೆಯೋ? ಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿರುವ ಅವ್ಯವಸ್ಥೆ ಸರಿಯಾಗುವುದೋ ಇಲ್ಲವೋ? ಅಥವಾ ಇವೆಲ್ಲರದರ ವಿಚಾರದ ತಳಮಳದಲ್ಲಿಯೇ ನಾವು ಯಾವಾಗಲೂ ಇರಬೇಕೆ? ಬಹುಶಃ ಪ್ರಶ್ನೆಗಳ ಸುಳಿಯಲ್ಲಿ ಸಿಲುಕದೇ ಸಂತಸದಿಂದ ಜೀವನ ನಡೆಸಬೇಕೆಂದು ಅಪೇಕ್ಷೆ ಇರಬಹುದು ಈ ರೀತಿಯ ಪ್ರಶ್ನೆಗಳನ್ನು ಸನ್ಮಾನ್ಯ ಡಿ ವಿ ಗುಂಡಪ್ಪನವರು ತಮ್ಮನ್ನೇ ತಾವು ಕೇಳಿಕೊಳ್ಳುತ್ತಾ, ಓದುಗರ ಮುಂದೆ ಪ್ರಸ್ತಾಪಿಸುತ್ತಾರೆ.
ನಿರೂಪಣೆ - ತಿಮ್ಮಣ್ಣ ಭಟ್, ಬೆಂಗಳೂರು.
ಪ್ರಸರಣ - ಶ್ರೀ ಸ್ವರ್ಣವಲ್ಲಿ ಭಕ್ತವೃಂದ
.jpg)