ಕಗ್ಗಸೌರಭ - 8
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? ।
ಭ್ರಮಿಪುದೇನಾಗಡಾಗ ಕರ್ತೃವಿನ ಮನಸು? ॥
ಮಮತೆಯುಳ್ಳವನಾತನಾದೊಡೀ ಜೀವಗಳು ।
ಶ್ರಮಪಡುವುವೇಕಿಂತು? - ಮಂಕುತಿಮ್ಮ ॥ ೮ ॥
ಈ ಭಗವಂತನ ಸೃಷ್ಟಿಯಲ್ಲಿ ಒಂದು ಕ್ರಮ ಅಥವಾ ಗುರಿ ಏನಾದರೂ ಇದೆಯೇ? ಈ ಸೃಷ್ಟಿಕರ್ತನ ಮನಸ್ಸು ಏಕೆ ಆಗಾಗ ವಿಚಲಿತವಾಗಿ ಎಲ್ಲೆಲ್ಲೋ ಹರಿದಾಡುತ್ತದೆ. ?ತಾನು ಸೃಷ್ಟಿಸಿದ ಜೀವಿಗಳ ಮೇಲೆ ಅವನಿಗೆ ಪ್ರೀತಿ ವಾತ್ಸಲ್ಯಗಳು ಇರುವುದಾದರೆ ಈ ಜೀವಿಗಳು ಏತಕ್ಕಾಗಿ ಈ ರೀತಿಯ ಕಷ್ಟಗಳನ್ನು ಅನುಭವಿಸುತ್ತವೆ?
ಇದೆಲ್ಲವೂ ಭಗವಂತನ ಲೀಲೆಯಾದ್ದರಿಂದ, ಬೇಗುದಿ ಬೇಡ, ವಿಶ್ವಾಸವಿರಲಿ.
ನಿರೂಪಣೆ - ತಿಮ್ಮಣ್ಣ ಭಟ್, ಬೆಂಗಳೂರು.
ಪ್ರಸರಣ - ಸ್ವರ್ಣವಲ್ಲಿ ಭಕ್ತವೃಂದ
.jpg)