🌺 ज्ञानं विज्ञानसहितं यज्ज्ञात्वा मोक्ष्यसेऽशुभात्।🌺

ಕಗ್ಗಸೌರಭ - 17

 ಕಗ್ಗ ಸೌರಭ - 17 




ತಳಮವಿದೇನಿಳೆಗೆ? ದೇವದನುಜರ್ಮಥಿಸೆ ।

ಜಳನಿಧಿಯೊಳಾದಂತೆ ಸುಧೆಗೆ ಪೀಠಿಕೆಯೇಂ? ॥

ಹಾಳಾಹಳಾವ ಕುಡಿವ ಗಿರಿಶನಿದ್ದಿರ್ದೊಡೀ । 

ಕಳವಳವದೇತಕೆಲೋ? - ಮಂಕುತಿಮ್ಮ ॥ ೧೭ ॥

ದೇವಲೋಕದಲ್ಲಿ ಅಮೃಥವನ್ನು ಪಡೆಯಲು ಸಮುದ್ರ ಮಂಥನ ನಡೆಯಿತು. ಅದನ್ನು ನಡೆಸಿದವರು ದೇವತೆಗಳು ಮತ್ತು ದಾನವರು. ಇವರನ್ನು ಗುಂಡಪ್ಪನವರು ಸೂಕ್ತವಾಗಿ “ದೇವಲೋಕದ ಅನುಜರ್” ಎಂದು ಸಂಬೋಧಿಸುತ್ತಾರೆ. ಏಕೆಂದರೆ ಪುರಾಣದ ಪ್ರಕಾರ ಈ ದೇವತೆಗಳು ಮತ್ತು ದಾನವರು ಇಬ್ಬರೂ ಕಶ್ಯಪ ಬ್ರಹ್ಮನ ಮಕ್ಕಳು. ಹಾಗಾಗಿ ಅವರನ್ನು ಅಣ್ಣ ತಮ್ಮಂದಿರು ಎಂದಿದ್ದಾರೆ. ವಾಚಕರು ಈ ದೇವದಾನವರು ನಡೆಸಿದ ಅಮೃತ ಮಂಥನದ ಕಥೆಯನ್ನು ಬೇರೆಯಾಗಿ ಓದಬೇಕಾಗಿ ವಿನಂತಿ. ಆದರೆ ಆ ಮಂಥನದಲ್ಲಿ ಮೊದಲು ಹಾಲಾಹಲ ಅಂದರೆ ವಿಷದ ಉದ್ಭವವಾಯಿತಂತೆ. ಘನ ಘೋರ ವಿಷವನ್ನು ಲೋಕ ಕಲ್ಯಾಣಕ್ಕಾಗಿ ಗಿರಿಜಾಪತಿ ಪರಮಶಿವನು ಕುಡಿದುಬಿಟ್ಟನಂತೆ. ಅದನ್ನು ಪಾರ್ವತಿ ಕಂಠದಲ್ಲೇ ತಡೆದದ್ದರಿಂದ ಅದು ಅಲ್ಲೇ ನಿಂತು, ಶಿವನು ನೀಲಕಂಠ ಮತ್ತು ವಿಷಕಂಠನಾದನಂತೆ.

ಹಾಲಾಹಲವನ್ನು ಕುಡಿಯಲು ಗಿರೀಶನಿರುವಾಗ ಕಳವಳ ಏಕೆ ಎನ್ನುವ ಆಶಾಭಾವನೆ ಇರಲಿ.

ನಿರೂಪಣೆ - ತಿಮ್ಮಣ್ಣ ಭಟ್, ಬೆಂಗಳೂರು.

ಪ್ರಸರಣ  - ಸ್ವರ್ಣವಲ್ಲಿ ಭಕ್ತವೃಂದ