ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ ।
ಮಣ್ಣೆನುವನ್; ಅವನ ವರ ಮಣ್ಣೆನುವೆ ನೀನು ॥
ಭಿನ್ನಮಿಂತಿರೆ ವಸ್ತುಮೌಲ್ಯಹಳ ಗಣನೆಯೀ ।
ಪಣ್ಯಕ್ಕೆ ಗತಿಯೆಂತೊ? - ಮಂಕುತಿಮ್ಮ ॥ ೨೧ ॥
ಯಾವುದನ್ನು ನಾವು ಚಿನ್ನ ಎಂದು ಕೈಗೆ ಎತ್ತಿಕೊಳ್ಳುತ್ತೇವೆಯೋ, ಅದು ವಾಸ್ತವದಲ್ಲಿ ಚಿನ್ನವಾಗಿರದೆ, ವಿಧಿಯಾಟದಲ್ಲಿ ಮಣ್ಣಂತೆ ನಿಷ್ಪ್ರಯೋಜಕವಾಗುತ್ತದೆ. ಆದರೆ ಕೆಲವು ಬಾರಿ ಬಯಸದೆ ಸಂದ ಭಾಗ್ಯವನ್ನು, ಆಪರಮಾತ್ಮನ ಕರುಣೆಯಿಂದ ವರ ರೂಪದಲ್ಲಿ ಸಂದದ್ದು ನಮಗೆ ನಿಷ್ಪ್ರಯೋಜಕವಾಗಿ ಕಾಣುತ್ತದೆ. ಹೀಗೆ ವಸ್ತುಗಳ ನಿಜರೂಪ ಗುರುತಿಸುವುದರಲ್ಲಿ ವ್ಯತ್ಯಾಸವಾದರೆ ಈ ಜಗತ್ತಿನ ವ್ಯಾಪಾರವು ನಾವಂದುಕೊಂಡಂತೆ ನಡೆಯುವುದಿಲ್ಲ. ಭಗವಂತನ ಲೀಲೆಯಂತೆ ಎಲ್ಲವೂ ಸಾಗುತ್ತದೆ.
ಅಹಂಕಾರವನ್ನು ಬಿಟ್ಟರೆ ಹಿತ ಎನ್ನುವ ಅರ್ಥದಲ್ಲಿದೆ ಈ ಕಗ್ಗದ ಆಂತರ್ಯ.
ಲೇಖಕರು: ತಿಮ್ಮಣ್ಣ ಭಟ್ ಬೆಂಗಳೂರು
ಪ್ರಸರಣ: ಶ್ರೀ ಸ್ವರ್ಣವಲ್ಲೀ ಭಕ್ತವೃಂದ